Home » ಸುಳ್ಳು ಸುದ್ದಿಕೋರರ ಮೇಲೆ ಕ್ರಮ ಕೈಗೊಳ್ಳಿ : ಸಿ ಎಂ
 

ಸುಳ್ಳು ಸುದ್ದಿಕೋರರ ಮೇಲೆ ಕ್ರಮ ಕೈಗೊಳ್ಳಿ : ಸಿ ಎಂ

by Kundapur Xpress
Spread the love

ಬೆಂಗಳೂರು : ‘ರಾಜ್ಯದಲ್ಲಿ ಜನರ ರಕ್ಷಣೆ ಹಾಗೂ ಭದ್ರತೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ ನಿರ್ವಹಿಸಬೇಕು. ಜತೆಗೆ ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾನೂನು ಸುವ್ಯವಸ್ಥೆ ಕುರಿತು ಶನಿವಾರ ವಿಧಾನಸೌಧದಲ್ಲಿ ಗೃಹ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿದ ಅವರು, ಯಾವುದೇ ಕಾರಣಕ್ಕೂ ಭದ್ರತೆ ವಿಚಾರದಲ್ಲಿ ರಾಜಿ ಆಗಬಾರದು ಎಲ್ಲಾ ಕಮಿಷನರೇಟ್‌ಗಳು ಎಚ್ಚರಿಕೆಯಿಂದ ಇರಬೇಕು. ಪ್ರಮುಖ ಸ್ಥಾವರಗಳಲ್ಲಿ ಭದ್ರತೆ ಹೆಚ್ಚಿಸಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಕಡೆ ವಿಶೇಷ ನಿಗಾ ವಹಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಕಿಸ್ತಾನ ಹಾಗೂ ಭಾರತ ನಡುವೆ ಕದನ ವಿರಾಮ ಘೋಷಣೆ ಆಗಿದ್ದರೂ ಎಚ್ಚರಿಕಾ ಕ್ರಮಗಳನ್ನು ಮುಂದುವರೆಸಬೇಕು ಎಂದು ಸ್ಪಷ್ಟಪಡಿಸಿದರು. ಗೃಹ ಸಚಿವರು, ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು, ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಪೊಲೀಸ್ ಇಲಾಖೆ ಸಂಪೂರ್ಣ ಎಚ್ಚರಿಕೆಯಿಂದ ಇರಬೇಕು. ಕೇಂದ್ರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ವರಿಷ್ಠಾಧಿಕಾರಿಗಳ ನಡುವೆ ಸಮರ್ಪಕ ಸಮನ್ವಯತೆ ಇರಬೇಕು ಎಂದರು

 

Related Articles

error: Content is protected !!