ಬೆಂಗಳೂರು : ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿಯನ್ನು ನಾವು ಮಾಡುತ್ತೇವೆ. ಅಧಿಕಾರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿಕೊಂಡು ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಪ್ರವಾಸೋದ್ಯಮ ಅತ್ಯಂತ ನಿರ್ಲಕ್ಷ್ಯಕ್ಕೆ ಗುರಿಯಾಗಿದೆ. ಕರಾವಳಿಯಲ್ಲಿ ಉತ್ತಮ ಪಂಚತಾರಾ ಹೋಟೆಲ್ ಇಲ್ಲ ವಿದೇಶಿ ಪ್ರವಾಸಿಗರು ಬಂದರೆ ಉಳಿದುಕೊಳ್ಳಲು ಆ ಗುಣಮಟ್ಟದ ಹೋಟೆಲ್ ಅಗತ್ಯ ಎಂದರು.
ಕರ್ನಾಟಕ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶವಿರುವ ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾ ಗಿಲ್ಲ ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾ ಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿ ಕಾರಿಗಳು ಕ್ರಮ ಕೈಗೊಳ್ಳಬೇಕು. ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತ್ರತವಾದ ಸಮಾಲೋಚನೆ ನಡೆಸಬೇಕು ಎಂದು ಸೂಚನೆ ನೀಡಿದರು.