ವಿಧಾನಸಭೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಯ ತಿರುಗೇಟು ನೀಡಲು ಮುಂದಾಗಿದ್ದು, ಬಿಜೆಪಿ ಅಧಿಕಾರಾವಧಿಯ 21 ಹಗರಣಗಳ ತನಿಖೆ ನಡೆಸುವುದಾಗಿ ಪ್ರಕಟಿಸಿದ್ದಾರೆ.
ಶುಕ್ರವಾರ ಸದನದಲ್ಲಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಧರಣಿ ನಡುವೆಯೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಮುಖ್ಯಮಂತ್ರಿಯ ಹೆಸರಿಗೆ ಮಸಿ ಬಳಿಯುವುದು ಮತ್ತು ಸರ್ಕಾರ ಎಸ್‌ಸಿ/ಎಸ್‌ಟಿ ವಿರುದ್ಧ ಇದೆ ಎಂದು ಬಿಂಬಿಸುವುದು ಬಿಜೆಪಿಯ ಹುನ್ನಾರವಾಗಿದೆ.
ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವ ಯಾವ ನಿಗಮಗಳಲ್ಲಿ ಎಷ್ಟೆಲ್ಲಾ ಭ್ರಷ್ಟಾಚಾರ ನಡೆದಿದೆ ಎಂಬುದರ ಕುರಿತು ಚರ್ಚೆಗಳು ನಡೆಯುತ್ತಿವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತದಲ್ಲಿ 21 ಭ್ರಷ್ಟಾಚಾರ ಗಳು ನಡೆದಿವೆ. ಅವುಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಹೇಳಿದರು. ಸಂವಿಧಾನ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಬಿಜೆಪಿ ದಮನಿತ ಸಮುದಾಯಗಳ ವಿರುದ್ದ ಇದೆ. ಬಿಜೆಪಿಯೇ ಭ್ರಷ್ಟಾಚಾರಗಳ ಪಿತಾಮಹ