ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಜೈನ ಮುನಿಗಳ ಹತ್ಯೆಯಿಂದ ಆರಂಭಗೊಂಡು ತಿಂಗಳಿಗೆ ಶತಕದ ಗಡಿಯನ್ನು ದಾಟಿದೆ ಹತ್ಯೆ ಮತ್ತು ಆತ್ಮಹತ್ಯೆ ಈ ಸರ್ಕಾರದ ಸಾಧನೆಯೇ? ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಸುದ್ದಿ ಗೋಷ್ಠಿ ನಡೆಸಿದ ಅವರು, ರಾಜ್ಯ ಸರ್ಕಾರವು ಒಂದು ವರ್ಷ ಪೂರೈಸಿದೆ. ಆದರೆ, ಒಂದು ವರ್ಷದಲ್ಲಿ ಸಾವಿರಕ್ಕೂ ಹೆಚ್ಚು ಹತ್ಯೆ, ಸಾವಿರಕ್ಕೂ ಹೆಚ್ಚು ಆತ್ಮಹತ್ಯೆ ಸರ್ಕಾರದ ಸಾಧನೆಯೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ನ್ಯಾಷನಲ್ ಕೈಂ ರೆಕಾರ್ಡ್ಸ್ ಬ್ಯೂರೋ ಪ್ರಕಾರ, ಕಳೆದ ನಾಲ್ಕು ತಿಂಗಳಲ್ಲಿ ಕರ್ನಾಟಕದಲ್ಲಿ 430ಕ್ಕೂ ಹೆಚ್ಚು ಕೊಲೆಗಳು ನಡೆದಿವೆ ಎಂದು ಅವರು ತಿಳಿಸಿದರು