ಸಂಡೂರು : ವಾಲ್ಮೀಕಿ ನಿಗಮದ ಹಣವನ್ನು ಮಂತ್ರಿಯೇ ನುಂಗಿ ಹಾಕಿದ್ದು, ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜನತೆಗೆ ನ್ಯಾಯ ಕೊಡಿಸುವ ಬದಲು, ತಮ್ಮ ಪತ್ನಿಗೆ ನ್ಯಾಯ ಕೊಡಲು ಒದ್ದಾಡುತ್ತಿದ್ದಾರೆ. ಹೀಗಾಗಿ ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಭ್ರಷ್ಟಾಚಾರಕ್ಕೆ ತಕ್ಕ ಶಿಕ್ಷೆ ನೀಡಬೇಕು ಎಂದು ಎಂಎಲ್‌ಸಿ ಸಿ.ಟಿ.ರವಿ ಹೇಳಿದ್ದಾರೆ. ಪಟ್ಟಣದಲ್ಲಿ ಬುಧವಾರ ನಡೆದ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಪಂಕ್ಚರ್ ಆಗಿವೆ. ಚುನಾವಣೆ ಬಂದಾಗೊಮ್ಮೆ ಅಕೌಂಟಿಗೆ ಹಣ ಹಾಕಲಾಗುತ್ತಿದೆ. ಹಾಲಿನಿಂದ ಆಲ್ಕೋಹಾಲ್‌ವರೆಗೂ ಬೆಲೆ ಏರಿಕೆಯಾಗಿದ್ದು, ಈಗ ರೇಷನ್ ಕಾರ್ಡ್ ರದ್ದುಗೊಳಿಸಲು ಮುಂದಾಗಿದ್ದಾರೆ. 20ರೂ. ಇದ್ದ ಬಾಂಡ್ ಪೇಪರ್‌ನ ಬೆಲೆ 100ಕ್ಕೆ ಹೆಚ್ಚಿಸಲಾಗಿದೆ ಎಂದರು.