ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣದಲ್ಲಿ ಸತ್ಯಶೋಧನೆ ನಡೆಸುವಂತೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ಸೋಮವಾರ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ದೂರು ಸಲ್ಲಿಸಿತು.
ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಲಕ್ಷ್ಮೀ ಹೆಬ್ಬಾಳ್ಳರ್ ನಿರ್ದೇಶನದಂತೆ ಸಂವಿಧಾನ ಮತ್ತು ಕಾನೂನು ಉಲ್ಲಂಘನೆ ಮಾಡಿ ಪೊಲೀಸ್ ಇಲಾಖೆ ಮೂಲಕ ಅಧಿಕಾರದ ದುರ್ಬಳಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕ್ರಮಕೈಗೊಳ್ಳುವಂತೆಯೂ ಒತ್ತಾಯಿಸಲಾಗಿದೆ. ಈ ಮೂಲಕ ಸಚಿವ ಲಕ್ಷ್ಮೀ ಹೆಬ್ಬಾಳರ್ ಹಾಗೂ ಸಿ.ಟಿ. ರವಿ ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳ ತಲುಪಿದ್ದು ರಾಜ್ಯಪಾಲರ ಮುಂದಿನ ನಡೆ ಕಾದುನೋಡಬೇಕಷ್ಟೆ…