102
ಕಾರವಾರ : ಕಾಂಗ್ರೆಸ್ ಶಾಸಕ ಸತೀಶ ಸೈಲ್ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ದಾಳಿಯಲ್ಲಿ 1.41 ಕೋಟಿ ನಗದು ಹಾಗೂ 6.75 ಕೇಜಿ ಬಂಗಾರವನ್ನು ಜಪ್ತಿ ಮಾಡಲಾಗಿದೆ. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪಿ ಗಳಾಗಿರುವ ವ್ಯಕ್ತಿಗಳ ಸಂಸ್ಥೆಗಳಿಗೆ ಸೇರಿದ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 14.13 ಕೋಟಿ ಮೊತ್ತವನ್ನು ಸ್ಥಗಿತಗೊಳಿಸಲಾಗಿದೆ.
ಕಾರವಾರ ತಾಲೂಕಿನ ಸದಾಶಿವಗಡದಲ್ಲಿನ ಸತೀಶ ಸೈಲ್ ನಿವಾಸದ ಮೇಲೆ ಇ.ಡಿ. ಬೆಂಗಳೂರು ವಿಭಾಗದ ಅಧಿಕಾರಿಗಳ ತಂಡ ನಸುಕಿನಲ್ಲಿ ದಾಳಿ ನಡೆಸಿತ್ತು. ದಾಖಲೆಗಳನ್ನು ಪರಿಶೀಲಿಸಿ ಮಹತ್ವದ ದಾಖಲೆಗಳು ಹಾಗೂ ಅಪಾರ ಪ್ರಮಾಣದ ನಗದು, ಬಂಗಾರವನ್ನು ವಶಪಡಿಸಿಕೊಂಡಿದೆ.

