70
ನವದೆಹಲಿ : ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಅಂಕ ಉತ್ತಮಪಡಿಸಿಕೊಳ್ಳಲು ಕರ್ನಾಟಕದಲ್ಲಿ ಈಗಾಗಲೇ 3 ಪರೀಕ್ಷೆಗಳು ಉಂಟು. ಈಗ ಇದೇ ಮಾದರಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ (2026) 10ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 2 ಬಾರಿ ಅಂತಿಮ ಪರೀಕೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಿರ್ಧರಿಸಿದೆ.
ಅನುತ್ತೀರ್ಣರಾದವರು ತೇರ್ಗಡೆಯಾಗಲು ಹಾಗೂ ಕಮ್ಮಿ ಫಲಿತಾಂಶ ಪಡೆದವರು ಅಂಕ ಉತ್ತಮಪಡಿಸಿ ಕೊಳ್ಳಲು ಇವು ಸಹಕಾರಿಯಾಗಲಿವೆ. ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಮಾತನಾಡಿ, ‘ಇದರಡಿ ಮೊದಲ ಪರೀಕ್ಷೆ ಬರೆಯುವುದು ಕಡ್ಡಾಯವಾಗಿದ್ದು, 2ನೇ ಪರೀಕ್ಷೆ ಐಚ್ಛಿಕವಾಗಿದೆ ಎಂದು ತಿಳಿಸಿದ್ದಾರೆ

