ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರು ಕುಳ (ಪೋಕ್ಸ್) ಪ್ರಕರಣ ಸಂಬಂಧ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಮೂವರು ಬೆಂಬಲಿಗರ ವಿರುದ್ದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಗುರುವಾರ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ಬಾಲಕಿ ಮೇಲೆ ಲೈಂಗಿಕ ಕಿರುಕುಳ, ಕೃತ್ಯ ಬೆಳಕಿಗೆ ಬಾರದಂತೆ ಸಾಕ್ಷ್ಯ ನಾಶ ಹಾಗೂ ಸಂತ್ರಸ್ತೆಗೆ ಹಣದ ಆಮಿಷವೊಡ್ಡಿದ್ದ ಆರೋಪಗಳು ಸಾಬೀತಾಗಿವೆ ಎಂದು ಸಿಐಡಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.