Home » ದಲಿತರ ಮೇಲೆ ದೌರ್ಜನ್ಯ 2 ತಿಂಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಲು ಸಿಎಂ ಸೂಚನೆ
 

ದಲಿತರ ಮೇಲೆ ದೌರ್ಜನ್ಯ 2 ತಿಂಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಲು ಸಿಎಂ ಸೂಚನೆ

by Kundapur Xpress
Spread the love

ಬೆಂಗಳೂರು : ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಇದು ಶೇ.100 ಪ್ರಕರಣಗಳಲ್ಲೂ ಅನ್ವಯವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ವಿಧಾನಸೌಧ ಸಭಾಂಗಣದಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು

 

Related Articles

error: Content is protected !!