ಬೆಂಗಳೂರು : ಕಳೆದ ಎಂಟು ತಿಂಗಳುಗಳಿಂದ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಡಾ. ರಜನೀಶ್ ಗೋಯಲ್ ಅವರು ಮಂಗಳವಾರ ಸೇವಾ ನಿವೃತ್ತಿ ಹೊಂದಿದ್ದಾರೆ.ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿ ಯಾಗಿ ಡಾ. ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅವರು ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಅಧಿಕಾರಿಯೊಬ್ಬರು ತಮ್ಮ ಪತಿಯ ನಂತರ ಪತ್ನಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೂರನೇ ನಿದರ್ಶನವಾಗಿದೆ.