ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನರ್ ರಚನೆ ಸನ್ನಿಹಿತವಾಗಿದ್ದು, ಸಚಿವ ಸಂಪುಟವನ್ನು ಪುನರ್ ರಚಿಸುವ ಸಂಬಂಧ ವರಿಷ್ಠರ ಜತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಇಂದು ಮಂಗಳವಾರ ದಿಲ್ಲಿಗೆ ತೆರಳಲಿದ್ದಾರೆ. ರಾಜ್ಯ ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯಸಚಿವ ಸಂಪುಟ ಪುನರ್ ರಚನೆಯ ವಿಚಾರ ಮುನ್ನಲೆಗೆ ಬಂದಿದೆ. ಕಳೆದ ಲೋಕಸಭೆ ಚುನಾವಣೆಯ ನಂತರ ಸಂಪುಟ ಪುನರ್ ರಚನೆಯಾಗಬೇಕು ಎಂಬ ಒತ್ತಾಯ ಕಾಂಗ್ರೆಸ್‌ನಲ್ಲಿ ಕೇಳಿಬಂದಿತ್ತು. ವಿಧಾನಸಭೆ ಅಧಿವೇಶನದವರೆಗೂ ಈ ಬಗ್ಗೆ ಚರ್ಚೆ ಬೇಡ ಎಂಬ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಂಪುಟ ಪುನರ್ ರಚನೆ ಬೇಡಿಕೆ ತಣ್ಣಗಾಗಿತ್ತು ಇದೀಗ ಸಂಪುಟ ಪುನರಚನೆ ಮತ್ತೇ ಗರಿಗೆದರಿದೆ
Categories
ಇಂದು ದಿಲ್ಲಿಗೆ ಸಿಎಂ, ಡಿಸಿಎಂ