Home » ಸಿಎಂ, ಡಿಸಿಎಂ ಇಂದು ದಿಲ್ಲಿಗೆ
 

ಸಿಎಂ, ಡಿಸಿಎಂ ಇಂದು ದಿಲ್ಲಿಗೆ

ವಿವಿಧ ಕಾರ್ಯಕ್ರಮದಲ್ಲಿ ಭಾಗಿ

by Kundapur Xpress
Spread the love

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಶುಕ್ರವಾರ ಸಂಜೆ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಮಾಹಿತಿ ಮತ್ತ ತಂತ್ರಜ್ಞಾನ ಇಲಾಖೆ ವತಿಯಿಂದ ‘ಬೆಂಗಳೂರು ಟೆಕ್ ಶೃಂಗಸಭೆ 2025’ರ ಮುನ್ನುಡಿಯಾಗಿ ಆಯೋಜಿಸಿರುವ ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ಭಾಗವಹಿಸಲಿದ್ದಾರೆ.

ಬಳಿಕ ವಿವಿಧ ದೇಶಗಳ ರಾಯಭಾರಿಗಳೊಂದಿಗೆ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಲಿದ್ದಾರೆ. ಆ.2ರಂದು ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ – ಭವನದಲ್ಲಿ ಆಯೋಜಿಸಿರುವ ‘ಸಾಮಾಜಿಕ ನ್ಯಾಯ, ಡಾ. ಬಿ.ಆರ್. ಅಂಬೇಡ್ಕರ್ ಅವರ ದೃಷ್ಟಿಕೋನ’ ಕುರಿತಾದ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ,ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ. ಎಐಸಿಸಿ ಅಧ್ಯಕ್ಷ ಖರ್ಗೆ, ಲೋಕಸಭೆಯ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ಈ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

 

Related Articles

error: Content is protected !!