ಬೆಂಗಳೂರು : ಎಸ್‌ಪಿ, ಡಿಸಿಪಿ ಮತ್ತು ಐಜಿ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ದಿನ ಒಂದೊಂದು ಠಾಣೆಗಳಿಗೆ ಭೇಟಿ ನೀಡಿ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶನಿವಾರ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರದಿಂದ ಎಸ್‌ಪಿ, ಡಿಸಿಪಿ ಮತ್ತು ಐಜಿ ಮಟ್ಟದ ಅಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಿ ಕೂಲಂಕಷವಾಗಿ ಪರಿಶೀಲನೆ ನಡೆಸಬೇಕು.
ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರೊಂದಿಗೆ ಯಾವುದೇ ಕಾರಣಕ್ಕೂ ಶಾಮೀಲಾಗಬಾರದು. ಒಂದು ವೇಳೆ ರಿಯಲ್ ಎಸ್ಟೇಟ್ ಮಾಡುವುದು ತಿಳಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಯದೆ ಯಾವ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಮಾದಕ ವಸ್ತು, ಕಳ್ಳತನ, ದರೋಡೆ, ಜೂಜು, ಮಟ್ಕಾ ಮುಂತಾದವು ಗೊತ್ತಿಲ್ಲದೆ ನಡೆಯಲು ಸಾಧ್ಯವಿಲ್ಲ. ಕೆಲವೆಡೆ ಪೊಲೀಸಿನವರು ಇಂತಹವರೊಂದಿಗೆ ಶಾಮೀಲಾಗುತ್ತಾರೆ ಎಂದರು