Home » ರಾಜ್ಯದಲ್ಲಿ ಅಪರಾಧ ಪ್ರಮಾಣ ಭಾರಿ ಇಳಿಕೆ : ಸಿದ್ದರಾಮಯ್ಯ
 

ರಾಜ್ಯದಲ್ಲಿ ಅಪರಾಧ ಪ್ರಮಾಣ ಭಾರಿ ಇಳಿಕೆ : ಸಿದ್ದರಾಮಯ್ಯ

by Kundapur Xpress
Spread the love

ಬೆಂಗಳೂರು : ಕಳೆದ 2 ವರ್ಷಗಳಿಂದ ರಾಜ್ಯದಲ್ಲಿ ಕೊಲೆ, ದರೋಡೆ ಹಾಗೂ ಕಳ್ಳತನ ಸೇರಿ ಅಪರಾಧ ಕೃತ್ಯಗಳು ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ, ಅಪರಾಧ ಪ್ರಕರಣಗಳ ತನಿಖೆಯ ಗುಣಮಟ್ಟ ಸಹ ಸುಧಾರಣೆಯಾಗಬೇಕು ಎಂದೂ ಅವರು ಹೇಳಿದ್ದಾರೆ.

ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಹಿರಿಯ ಅಧಿಕಾರಿಗಳ ಸಮ್ಮೇಳನದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ಅಪರಾಧ ಇಳಿಕೆ ಬಗ್ಗೆ ಅಂಕಿ- ಅಂಶ ಸಮೇತ ವಿವರಿಸಿದರು.

ಡ್ರಗ್ಸ್ ಮುಕ್ತ ರಾಜ್ಯವಾಗಬೇಕು

ಡ್ರಗ್ಸ್ ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಕಾನೂನಿನ ಮೂಲಕ ಏನೆಲ್ಲ ಕ್ರಮಗಳನ್ನು ಜರುಗಿಸಲು ಸಾಧ್ಯವೋ ಅದನ್ನೆಲ್ಲಾ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಡ್ರಗ್ಸ್ ಮಾಫಿಯಾ ಚಟುವಟಿಕೆ‌ ಸಹಿಸುವುದಿಲ್ಲ. ಅದಕ್ಕೆ ಆಸ್ಪದ ಕೂಡ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಗುಡುಗಿದರು.

 

Related Articles

error: Content is protected !!