Home » 5 ವರ್ಷ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ
 

5 ವರ್ಷ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ

ಬಂಡೆಯಂತೆ ಪೂರ್ಣಾವಧಿ ಆಡಳಿತ

by Kundapur Xpress
Spread the love

ಚಿಕ್ಕಬಳ್ಳಾಪುರ : ಸರ್ಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲುಗನಸು ಕಾಣುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಇಳಿಯಲಿದ್ದಾರೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ. ವಿಜಯೇಂದ್ರ, ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ ಹೇಳಿದ್ದೆಲ್ಲ ಸತ್ಯವಲ್ಲ ಎಂದರು.

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್ .ಡಿ. ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ. ಎಲ್ಲದಕ್ಕೂ ಸಾಕ್ಷಿ ಕೇಳುವ ಬಿಜೆಪಿಯವರು ಅವರು ಅಧಿಕಾರದಲ್ಲಿದ್ದಾಗ ಯಾವ ಸಾಕ್ಷಿಗುಡ್ಡೆ ಬಿಟ್ಟು ಹೋಗಿದ್ದಾರೆ ಎಂದು ಪ್ರಶ್ನಿಸಿದರು.

 

Related Articles

error: Content is protected !!