Home » ಇಡಿ ವರದಿ : ಸಿದ್ದರಾಮಯ್ಯ ಕಿಡಿ
 

ಇಡಿ ವರದಿ : ಸಿದ್ದರಾಮಯ್ಯ ಕಿಡಿ

by Kundapur Xpress
Spread the love

ಮಂಡ್ಯ : ಮುಡಾ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಬರುವ ಮುನ್ನವೇ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ. ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೆ.ಆ‌ರ್.ಪೇಟೆ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಇಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಿಡಿಕಾರಿದರು.

 

Related Articles

error: Content is protected !!