Home » ಗೃಹಲಕ್ಷ್ಮೀ ನಿಲ್ಲಿಸುವ ಮಾತೇ ಇಲ್ಲ : ಸಿಎಂ
 

ಗೃಹಲಕ್ಷ್ಮೀ ನಿಲ್ಲಿಸುವ ಮಾತೇ ಇಲ್ಲ : ಸಿಎಂ

by Kundapur Xpress
Spread the love

ಬೆಳಗಾವಿ : ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿ ಯೋಜನೆಯ ಹಲವು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯ ಹಣದಿಂದ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಈ ಯೋಜನೆ ತಮ್ಮ ಜೀವನದಲ್ಲಿ ಹೊಸ ಚೈತನ್ಯ ತಂದಿದೆ ಎಂದು ಫಲಾನುಭವಿಗಳು ವಿವರಿಸಿದರು. ಇದಕ್ಕಾಗಿ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಹೇಳಿದರು ಎಂದು ತಿಳಿಸಿದರು.

 

Related Articles

error: Content is protected !!