Home » ಶಿವಣ್ಣನ ಆರೋಗ್ಯ ವಿಚಾರಿಸಿದ ಸಿ ಎಂ
 

ಶಿವಣ್ಣನ ಆರೋಗ್ಯ ವಿಚಾರಿಸಿದ ಸಿ ಎಂ

by Kundapur Xpress
Spread the love

ಬೆಂಗಳೂರು : ಅಮೆರಿಕದಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬೆಂಗಳೂರಿಗೆ ವಾಪಸಾಗಿರುವ ನಟ ಶಿವರಾಜ್ ಕುಮಾ‌ರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬೆಂಗಳೂರಿನ ನಾಗವಾರದಲ್ಲಿರುವ ಶಿವರಾಜ್ ಕುಮಾ‌ರ್ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಅವರು ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಅವರೊಂದಗೆ ಕುಶಲೋಪರಿ ವಿಚಾರಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಶಸ್ತ್ರ ಚಿಕಿತ್ಸೆಯ ಮರುದಿನವೇ ಶಿವರಾಜ್‌ ಕುಮಾರ್‌ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದೆ ಎಂದು ಹೇಳಿದರು.

 

Related Articles

error: Content is protected !!