Home » ಕರೋನಾ ಎದುರಿಸಲು ಸಕಲ ಸಿದ್ದತೆ : ಸಿಎಂ
 

ಕರೋನಾ ಎದುರಿಸಲು ಸಕಲ ಸಿದ್ದತೆ : ಸಿಎಂ

by Kundapur Xpress
Spread the love

ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಕೊರೋನಾದಿಂದ ಯಾವುದೇ ಭಯವಿಲ್ಲ ಆದರೂ, ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಮ್ಲಜನಕ, ವಾಡ್ ೯ಗಳ ಲಭ್ಯತೆಗಳನ್ನು ಪರಿಶೀಲಿಸಿ, ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆಮಾತನಾಡಿ, ಕೊರೋನಾ ಸಂಬಂಧ ಸೋಮವಾರ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೂಚನೆ -ನೀಡಿದ್ದೇನೆ. ಎಲ್ಲದಕ್ಕೂ ಸಿದ್ದರಾಗಿರುವಂತೆ ತಿಳಿಸಿದ್ದೇನೆ. ಆಸ್ಪತ್ರೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶಿಸಲಾಗಿದೆ. ಎಲ್ಲರೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿಲ್ಲ. ಆದರೆ, ವೃದ್ದರು ಮತ್ತು ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಲಾಗಿದೆ. ಸದ್ಯ ಕಾಣಿಸಿಕೊಂಡಿರುವ ಕೊರೋನಾ ತಳಿ ಗಂಭೀರವಾದುದಲ್ಲ. ಆದರೂ, ನೆಗಡಿ, – ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಎಂದರು.

 

Related Articles

error: Content is protected !!