96
ಬೆಂಗಳೂರು : ಮಾಜಿ ಸೈನಿಕರ ಕ್ಷೇಮಾಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ಸರ್ಕಾರ ಚಿಂತಿಸಿದೆ.’ ಜತೆಗೆ ಸೇನಾ ಕ್ಯಾಂಟೀನ್‌ಸಾಮಗ್ರಿಗಳಿಗೆ ಅಬಕಾರಿ ಸುಂಕದಿಂದ ವಿನಾಯ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಸೇನೆಗೆ ಗೌರವ ಸೂಚಿಸಲು ಕೆಪಿಸಿಸಿ ಬುಧವಾರ ಪುರಭವನದಲ್ಲಿ ಆಯೋಜಿಸಿದ್ದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಸೈನಿಕರಿಗೆ ಅನುಕೂಲದ ಕ್ರಮ ಸರ್ಕಾರ ಮಾಡಲಿದೆ. ಸೈನಿಕರನ್ನು ಗೌರವಿಸಬೇಕು. ಸೇನಾ ಕ್ಯಾಂಟೀನ್‌ಗಳಲ್ಲಿ ಮಾರಾಟವಾಗುವ ಸಾಮಗ್ರಿಗಳಿಗೆ ಅಬಕಾರಿ ಸುಂಕ ರದ್ದತಿಗೆ ನಿರ್ಧರಿಸಲಾಗಿದೆ. ಮಾಜಿ ಸೈನಿಕರ ಕ್ಷೇಮಾಭಿವೃದ್ಧಿಗೆ ಪ್ರತ್ಯೇಕ ನಿಗಮ ರಚನೆಗೆ ಪ್ರಯತ್ನಿಸಲಾಗುವುದು ಎಂದರು.

