80
ಬೆಂಗಳೂರು : ಹೈಕಮಾಂಡ್ ಸೂಚನೆ ಮೇರೆಗೆ ಸ್ವಪಕ್ಷದ ಶಾಸಕರ ಸಮಸ್ಯೆ ಆಲಿಸುವ ಪ್ರಕ್ರಿಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದು, ಮೊದಲ ದಿನದ ಸಭೆಯಲ್ಲಿ ಕ್ಷೇತ್ರಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸಿದ್ದರಾಮಯ್ಯ ಅವರು ಶಾಸಕರಿಗೆ ಪಾಠ ಮಾಡಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶಾಸಕರೊಂದಿಗೆ ಸಭೆ ನಡೆಸಿ ಸಮಸ್ಯೆ ಆಲಿಸಿದ ನಂತರ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ದೂರು ದುಮ್ಮಾನ ಆಲಿಸಲು ನಾಲ್ಕು ದಿನಗಳ ಸಭೆಗೆ ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಖ್ಯಮಂತ್ರಿ ಅವರ ಕಚೇರಿಯಲ್ಲಿ ನಡೆದ ಮೊದಲ ದಿನ ಮೈಸೂರು, ಚಾಮರಾಜನಗರ, ತುಮಕೂರು, ಕೊಡಗು, ದಕ್ಷಿಣ ಕನ್ನಡ, ಹಾಸನ ಜಿಲ್ಲೆಗಳ 22 ಶಾಸಕರು ಮತ್ತು ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಪ್ರಮುಖವಾಗಿ ಕ್ಷೇತ್ರವಾರು ಅನುಷ್ಠಾನಗೊಳಿಸಬೇಕಾದ ಕಾರ್ಯಕ್ರಮಗಳ ಕುರಿತು ಸಿದ್ದರಾಮಯ್ಯ ಅವರು ಶಾಸಕರಿಂದ ಮಾಹಿತಿ ಪಡೆದರು.

