110
ಹೊಸಪೇಟೆ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಇಂದು ಮೇ 20ಕ್ಕೆ ಎರಡು ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ಬೃಹತ್ ‘ಸಮರ್ಪಣೆ ಸಂಕಲ್ಪ ಸಮಾವೇಶ’ ಹಮ್ಮಿಕೊಳ್ಳಲಾಗಿದೆ.
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಪ್ರಿಯಾಂಕಾ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ವೇಣುಗೋಪಾಲ, ಸಿ ಎಂ’ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ಇಡೀ ಸಚಿವ ಸಂಪುಟದ ಸಚಿವರು, ಶಾಸಕರು, ಕಾಂಗ್ರೆಸ್ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
2 ವರ್ಷದ ಸಂಭ್ರಮಾಚರಣೆಯನ್ನು ಇನ್ನಷ್ಟು ಅರ್ಥಪೂರ್ಣ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಮಂಗಳವಾರದ ಕಾರ್ಯಕ್ರಮದ ವೇಳೆ ಕಂದಾಯ ಗ್ರಾಮಗಳನ್ನು ಘೋಷಣೆ ಮಾಡಿ, 1,11,111 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡುತ್ತಿದೆ

