ರಾಮನಗರ : ನಮ್ಮ ಪಕ್ಷದ ಒಬ್ಬ ಶಾಸಕನನ್ನೂ ಅಲ್ಲಾಡಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ,ಹಾಗೂ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಏನೂ ಮಾಡಲು ಸಾಧ್ಯವಿಲ್ಲ ಸರ್ಕಾರ ಬೀಳಿಸುತ್ತೇವೆ ಎಂಬುದು ಭ್ರಮೆ, ತಿರುಕನ ಕನಸು’ ಎಂದು ಬಿಜೆಪಿ – ಜೆ ಡಿ ಎಸ್ ನಾಯಕರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಸಚಿವರು ಪಾದಯಾತ್ರೆ ವಿರುದ್ಧ ಹರಿಹಾಯ್ದಿದ್ದಾರೆ. ಸರ್ಕಾರ ಸುಭದ್ರವಾಗಿದೆ ಎಂದು ಸಾರಿದ್ದಾರೆ.
ಮುಡಾ ಹಗರಣ ಸಂಬಂಧ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ‘ಮೈಸೂರು ಚಲೋ’ಗೆ ಪ್ರತಿಯಾಗಿ ಕಾಂಗ್ರೆಸ್ ನಡೆಸುತ್ತಿರುವ ಸರಣಿ ಜನಾಂದೋಲನ ಸಮಾವೇಶ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿತು. ಇದರ ಅಂಗವಾಗಿ ರಾಮನಗರದ ಹಳೇ ಬಸ್ ನಿಲ್ದಾಣದ ವೃತ್ತದಲ್ಲಿ ಶನಿವಾರ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಡಿಕೆಶಿ, ಸಚಿವರಾದ ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ,ಕೆ ಎಚ್ ಮುನಿಯಪ್ಪ ಜಮೀರ್ ಅಹಮದ್ ಮತ್ತಿತರ ನಾಯಕರು ಯಕರುಪಾಲ್ಗೊಂಡಿದ್ದರು.
ಸಮಾವೇಶಕ್ಕೆ ಚಾಲನೆ ನೀಡಿದ ಡಿಕೆಶಿ. ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಹರಿಹಾಯ್ದರು. ನವೆಂಬರ್, ಡಿಸೆಂಬರ್ ವೇಳೆಗೆ ಸರ್ಕಾರ ಕೆಡವಿ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ. ಕೆಡವಿ ಒಡೆದು ಹೋಗಲು ಈ ಸರ್ಕಾರ ಮಡಕೆಯೇ ಎಂದು ಟಾಂಗ್ ನೀಡಿದರು