ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಅನುಸರಿಸಬೇಕಾದ ತಂತ್ರಗಳ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಾಯಿತು.
ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಬೆಳಗ್ಗೆ ನಡೆದ ವಿಡಿಯೋ ಸಂವಾದದಲ್ಲಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ದೆಹಲಿಯಿಂದ ಪಾಲ್ಗೊಂಡಿದ್ದರು.
ಒಗ್ಗಟ್ಟು ಪ್ರದರ್ಶಿಸಲು ಸೂಚನೆ :
ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲರೂ ಒಗ್ಗೂಡಿ ಶ್ರಮಿಸಬೇಕು. ಸ್ಥಳೀಯ ಮಟ್ಟದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣಾ ಪ್ರಚಾರ ನಡೆಸಬೇಕು. ನಮ್ಮದೇ ಸರ್ಕಾರ ಇದ್ದು, ಮೂರು ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂದು ತಿಳಿಸಲಾಯಿತು