ಬೆಂಗಳೂರು : ಕಾಂಗ್ರೆಸ್‌ನಲ್ಲಿ ಸಮುದಾಯ ಸಭೆ, ಬಣ ರಾಜಕೀಯಕ್ಕೆ ಬ್ರೇಕ್ ಬಿದ್ದಂತೆ ಕಾಣುತ್ತಿಲ್ಲ ಸಚಿವರಾದ ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣ ಅವರ ಹೇಳಿಕೆಗಳನ್ನು ಗಮನಿಸಿದರೆ ಬಣ ರಾಜಕೀಯಕ್ಕೆ ಪುಷ್ಠಿ ನೀಡುವಂತಿದೆ. ಆಡಳಿರೂಢ ಕಾಂಗ್ರೆಸ್‌ನಲ್ಲಿ ಔತಣಕೂಟದ ಹೆಸರಿನಲ್ಲಿ ವೇಗ ಪಡೆದುಕೊಂಡಿದ್ದ ಬಣ ರಾಜಕೀಯ ತಪ್ಪಿಸಲು ಪಕ್ಷದ ಹೈಕಮಾಂಡ್ ಶಿಸ್ತುಕ್ರಮಕ್ಕೆ ಮುಂದಾದ ನಡುವೆಯೇ ಸಹಕಾರ ಸಚಿವ ಕೆ.ಎನ್. ರಾಜಣ್ಣ ಎಸ್.ಸಿ, ಎಸ್‌ಟಿ ಸಮುದಾಯದ ಜನಪ್ರತಿನಿಧಿಗಳ ಸಭೆ ನಡೆಸಿದರೆ ತಪ್ಪೇನು ? ಸಭೆ ಮಾಡಲು ಕೆಪಿಸಿಸಿ ಅಧ್ಯಕ್ಷರು ವಿರೋಧಿಸುವುದು ಈ ಸಮುದಾಯಕ್ಕೆ ಮಾಡುವ ಅವಮಾನ ಎಂಬ ಧಾಟಿಯಲ್ಲಿ ಹೇಳಿಕೆ ನೀಡಿ, ಹೈಕಮಾಂಡ್ ಗೆ ಸೆಡ್ಡು ಹೊಡೆದಿದ್ದಾರೆ. ಇನ್ನೊಂದೆಡೆ ಗೃಹ ಸಚಿವ ಜಿ.ಪರಮೇಶ್ವರ್ ಕೂಡ ಕೆಪಿಸಿಸಿ ಅಧ್ಯಕ್ಷರ ನಡೆಗೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಬಣ ರಾಜಕೀಯ ತಣಿಸಲು ದಿಲ್ಲಿಯಿಂದಲೇ ಸಂದೇಶ ರವಾನೆಯಾಗಿದ್ದು ಈ ದಿಸೆಯಲ್ಲಿ ಜ.13 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಔತಣಕೂಟ ರದ್ದು ಮಾಡಿಲ್ಲ, ಮುಂದೂಡಿಕೆ ಅಷ್ಟೇ : ಪರಮೇಶ್ವರ್
ಔತಣಕೂಟವನ್ನು ರದ್ದು ಮಾಡಿಲ್ಲ, ಮುಂದೂಡಿಕೆ ಮಾಡಿದ್ದೇವೆ ಅಷ್ಟೆ ನಮ್ಮ ಔತಣಕೂಟಕ್ಕೆ ಹೈಕಮಾಂಡ್ ವಿರೋಧ ಇಲ್ಲ. ಔತಣಕೂಟ ಬಗ್ಗೆ ನಾವು ದಿಲ್ಲಿಗೆ ಏನೂ ಹೇಳಿರಲಿಲ್ಲ. ಶಾಸಕರ ಸಭೆ ಅಂದಾಗ ಅವರ ಗಮನಕ್ಕೆ ಹೋಗುತ್ತದೆ. ಹೀಗಾಗಿ ಸುರ್ಜೇವಾಲ * ಕರೆ ಮಾಡಿ ಅವರೂ ಸಹ ಭಾಗವಹಿಸಲು ಉತ್ಸುಕವಾಗಿರುವುದಾಗಿ ತಿಳಿಸಿದರು. ಹಾಗಾಗಿ ಅವರಿಗೂ ಆಹ್ವಾನ ಕೊಟ್ಟಿದ್ದೇವೆ. ಮುಂದೆ ಸಮಯ ಕೋಡುತ್ತೇನೆ ಎಂದು ನಮಗೆ ಹೇಳಿದ್ದಾರೆ. ಹಾಗಾಗಿ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ. –