ಬೆಳಗಾವಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ 2024 ಡಿಸೆಂಬರ್ 27 ರಂದು ಮುಂದೂಡಲಾಗಿದ್ದ ‘ಜೈ ಬಾಪು ಜೈ ಭೀಮ್ ಮತ್ತು ಜೈ ಸಂವಿಧಾನ’ ಕಾರ್ಯಕ್ರಮವು ಜ.21ರಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜಿವಾಲಾ ಅವರು ಮುಖ್ಯ ವೇದಿಕೆಯನ್ನು ಈಗಾಗಲೇ ಪರಿಶೀಲನೆ ನಡೆಸಿದ್ದಾರೆ.
ನಗರ ಕಾಂಗ್ರೆಸ್‌ಮಯ : ಸಮಾವೇಶದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಇಡೀ ಬೆಳಗಾವಿ ನಗರ ಕಾಂಗ್ರೆಸ್ ಮಯವಾಗಿದೆ. ನಗರದ ಪ್ರಮುಖ ಬೀದಿಗಳು ವಿದ್ಯುತ್ ದೀಪಾಲಂ ಕಾರಗಳಿಂದ ಕಂಗೊಳಿಸುತ್ತಿವೆ