ಬೆಂಗಳೂರು : ಬಿಜೆಪಿ-ಜೆಡಿಎಸ್‌ನ ಮೈಸೂರು ಚಲೋ ಪಾದಯಾತ್ರೆಗೆ ಪ್ರತಿಯಾಗಿ ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ಧ ಹಾಗೂ ರಾಜ್ಯ ಬಿಜೆಪಿ-ಜೆಡಿಎಸ್ ಸರ್ಕಾರದ ಅವಧಿಯ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಜನಾಂದೋಲನ ರ್ಯಾಲಿ ಹಾಗೂ ಸಮಾವೇಶವನ್ನು ಆರಂಭಿಸಿದೆ. ಬಿಡದಿಯಿಂದ ಆರಂಭವಾಗಿರುವ ರ್ಯಾಲಿಯು ಆ.9ಕ್ಕೆ ಮೈಸೂರಿನಲ್ಲಿ ಅಂತ್ಯವಾಗಲಿದೆ.
ಬಿಡದಿಯಿಂದ ಶುಕ್ರವಾರ ಆರಂಭವಾದ ಜನಾಂದೋಲನ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಶಾಸಕರು, ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.