ಬೆಂಗಳೂರು : ಸರ್ಕಾರದ ಹಣಕಾಸು ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಬಾಕಿ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾ ಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬಾಕಿ ಬಿಲ್ ಪಾವತಿ ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ವಿಧಾನಸೌಧದಲ್ಲಿ ತಮ್ಮನ್ನು ಸೋಮವಾರ ಭೇಟಿಯಾದ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ, ಹಂತ ಹಂತವಾಗಿ ಬಾಕಿ ಬಿಲ್ ಪಾವತಿಸುವುದಾಗಿ ತಿಳಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾ ಡಿದ ಸಿದ್ದರಾಮಯ್ಯ, ಬಾಕಿ ಬಿಲ್ ಮೊತ್ತದಲ್ಲಿ 15 ಸಾವಿರ ಕೋಟಿ ರು. ಪಾವತಿಸು ವಂತೆ ಗುತ್ತಿಗೆದಾರರು ಮನವಿ ಮಾಡಿದ್ದಾರೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ಆಧರಿಸಿ ಬಾಕಿ ಬಿಲ್ ಪಾವತಿಗೆ ಸಂಬಂಧಿಸಿ ಕ್ರಮ ಕೈಗೊಳ್ಳಲಾಗುವುದು. ಏಪ್ರಿಲ್‌ನಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್‌ಗಳನ್ನು ಪಾವತಿಸುವುದಾಗಿ ತಿಳಿಸಿದ್ದೇನೆ ಎಂದರು.
ಬಾಕಿ ಬಿಲ್ ಪಾವತಿಸದಿದ್ದರೆ ರಾಹುಲ್ ಗಾಂಧಿ ಮತ್ತು ಖರ್ಗೆ ಅವರನ್ನು ಭೇಟಿಯಾಗಿ ದೂರು ನೀಡುತ್ತೇವೆ ಎಂಬ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಹೇಳಿಕೆಗೆ ಪ್ರತಿಕ್ರಿಯಿಸಿ, ಭೇಟಿಯಾದರೆ ಭೇಟಿಯಾಗಲಿ. ನಮ್ಮದೇನೂ ತಕರಾರಿಲ್ಲ ಎಂದು ಹೇಳಿದರು.

