85
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅನಾರೋಗ್ಯಪೀಡಿತರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಸರ್ಕಾರ ಸೂಚನೆ ನೀಡಿದೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರು ದಾಖಲಾಗಿರುವ ಆಸ್ಪತ್ರೆಗಳಲ್ಲೇ ಮಾದರಿ ಸಂಗ್ರಹಿಸಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ಈ ಮಧ್ಯೆ, ಬೆಂಗಳೂರಿನಲ್ಲಿ ಶನಿವಾರ ಕೋವಿಡ್ ಸೋಂಕಿನಿಂದ 84 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 38ಕೇರಿದೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಶನಿವಾರ ಒಂದೇ ದಿನ ಐದು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲೇ 92 ಜನರು ಪರೀಕ್ಷೆಗೊಳಪಟ್ಟಿದ್ದು, ಒಟ್ಟು 32 ಸಕ್ರಿಯ ಪ್ರಕರಣಗಳು ಬೆಳಕಿಗೆ ಬಂದಿದೆ

