ತುಮಕೂರು : ಇನ್ನು ಕೆಲ ವರ್ಷಗಳಲ್ಲೇ ಕರ್ನಾಟಕದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ತಲೆ ಎತ್ತಿ ನಿಲ್ಲಲಿದೆ. ತುಮಕೂರಿನಲ್ಲಿ ಕ್ರೀಡಾಂಗಣದ ಕಾಮಗಾರಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ
ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ, ‘ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದೆ. ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಕ್ರೀಡಾ ಪ್ರಗತಿಗೆ ಕ್ರೀಡಾಂಗಣ ಪೂರಕವಾಗಲಿದೆ’ ಎಂದು ತಿಳಿಸಿದರು. ಅಲ್ಲದೆ, ಶೀಘ್ರದಲ್ಲೇ ಕ್ರೀಡಾಂಗಣ ನಿರ್ಮಾಣ ಮಾಡಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.