Home » ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು
 

ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು

ಡಿ ಕೆ ಶಿ ಆಗ್ರಹ

by Kundapur Xpress
Spread the love

ಬೆಂಗಳೂರು: ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ 2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ ಎಂಬ 2ನೇ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಅವರು ಮಂಗಳವಾರ ಮಾತನಾಡಿದರು.

ಕರ್ನಾಟಕದ ಯೋಜನೆಗಳಿಗೆ ಕೇಂದ್ರ ಜಲಶಕ್ತಿ ಸಚಿವಾಲಯವು ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಂಡು ಅನುಮತಿ ಕೊಡಿಸಬೇಕು. ಮೇಕೆದಾಟು ಯೋಜನೆಗೆ ಡಿಪಿಆರ್ ಪರಿಗಣಿಸಿ, ಅನುಮತಿ ನೀಡುವಂತೆ ಸಿಡಬ್ಲ್ಯೂಸಿಗೆ ನಿರ್ದೇಶನ ನೀಡಬೇಕು. ಇದರಿಂದ ತಮಿಳುನಾಡಿಗೆ ಪ್ರತಿ ತಿಂಗಳ ಲೆಕ್ಕಾಚಾರದ ನೀರು ನೀಡಬಹುದು. ಜತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮತ್ತು ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಹೇಳಿದರು

 

Related Articles

error: Content is protected !!