Home » ಈ ಸಲವೂ ಸಮೀಕ್ಷೆ ಸುಳ್ಳಾಗಲಿದೆ : ಡಿಕೆಶಿ
 

ಈ ಸಲವೂ ಸಮೀಕ್ಷೆ ಸುಳ್ಳಾಗಲಿದೆ : ಡಿಕೆಶಿ

by Kundapur Xpress
Spread the love

ಬೆಂಗಳೂರು :  ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ 70-80 ಸ್ಥಾನ ಮಾತ್ರ ಗಳಿಸಲಿವೆ ಎಂದಿದ್ದವು. ಆ ಸಮೀಕ್ಷೆಗಳು ಸುಳ್ಳಾದಂತೆ ಈ ಬಾರಿಯೂ ಲೋಕಸಭೆ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗಲಿವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಪ್ರತಿಪಾದಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಖಚಿತವಾಗಿ ಎರಡಂಕಿ ಫಲಿತಾಂಶ ದಾಖಲಿಸಲಿದೆ. ಮೂರನೇ ಎರಡು ಭಾಗದಷ್ಟು ಸ್ಥಾನಗಳನ್ನು ಗಿಟ್ಟಿಸಲಿದೆ. ಇದು ನಾನು ಸ್ವಂತ ಮಾಡಿಸಿರುವ ಸಮೀಕ್ಷೆಯ ಅನುಭವದಿಂದ ಹೇಳುತ್ತಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು ಎಂದು ನುಡಿದರು

   

Related Articles

error: Content is protected !!