ಬೆಂಗಳೂರು: ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವರಿಗೆ ತಿರುಗೇಟು ನೀಡಿದರು. ಶನಿವಾರ ವಿಧಾನಸೌಧ ದಲ್ಲಿ ಕುಮಾರ ಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಕುಮಾರಸ್ವಾಮಿ ಅವರು ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು ಎಂದು ವಾಗ್ದಾಳಿ ನಡೆಸಿದರು.