ಬೆಂಗಳೂರು : ನನಗೆ ಎಲ್ಲಾ ಧರ್ಮಗಳ ಬಗ್ಗೆ ಪ್ರೀತಿ ಇದೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಸಿಗಲಿ ಎಂಬುದನ್ನು ನಾನು ನಂಬಿದ್ದೇನೆ ನಾನು ಬೇರೆ ಧರ್ಮಕ್ಕೆ ಯಾಕೆ ಹೋಗಲಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ ಎಂಬ ನಿಮ್ಮ ಹೇಳಿಕೆಯನ್ನು ಬಿಜೆಪಿಯವರು ಸ್ವಾಗತಿಸುತ್ತಿದ್ದಾರೆ ಎಂಬ ಮಾಧ್ಯಮಗಳು ಕೇಳಿದಾಗ, ನಾವು ಇಂತಹ ಧರ್ಮದಲ್ಲೇ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡಿರಲಿಲ್ಲ ಅಂಬೇಡ್ಕರ್ ಹಿಂದೂ ಧರ್ಮದಲ್ಲಿ ಹುಟ್ಟಿ ಬೌದ್ಧ ಧರ್ಮಕ್ಕೆ ಸೇರಿದರು. ಅದು ಅವರ ವೈಯಕ್ತಿಕ ನಿರ್ಧಾರ. ನನ್ನ ವಿಚಾರವನ್ನೂ ಎಲ್ಲರೂ ಚರ್ಚೆ ಮಾಡಲಿ ಬಿಡಿ. ನಾನು ನೊಣವಿನಕೆರೆ ಮಠಕ್ಕೆ ಹೋಗುತ್ತೇನೆ.
ಅದಕ್ಕೆ ನಮ್ಮವರು, ‘ನೀವು ನಮ್ಮ ಮಠಕ್ಕೆ ಬರುವುದಿಲ್ಲ, ಅಲ್ಲಿಗೆ ಹೋಗುತ್ತೀರಲ್ಲಾ’ ಎಂದು ಕೇಳುತ್ತಾರೆ. ನನ್ನ ನಂಬಿಕೆ ಇದ್ದ ಕಡೆ ನಾನು ಹೋಗುತ್ತೇನೆ. ನನಗೆ ಎಲ್ಲಿ ಒಳ್ಳೆಯದಾಗುತ್ತದೆ ಎಂದು ಅನಿಸುತ್ತದೆಯೋ ಅಲ್ಲಿಗೆ ಹೋಗುತ್ತೇನೆ. ನನ್ನ ನಂಬಿಕೆ ನನ್ನದು ಎಂದು ಹೇಳಿದರು

