Home » ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಬಗ್ಗೆ ಹೈಕಮಾಂಡ್ ಚರ್ಚೆ ಆಗಿಲ್ಲ
 

ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಬಗ್ಗೆ ಹೈಕಮಾಂಡ್ ಚರ್ಚೆ ಆಗಿಲ್ಲ

: ಡಿ ಕೆ ಶಿ

by Kundapur Xpress
Spread the love

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷಸ್ಥಾನ ಬದಲಾವಣೆ ಕುರಿತು ಹೈಕಮಾಂಡ್ ನನ್ನ ಬಳಿ ಯಾವುದೇ ಚರ್ಚೆ ಮಾಡಿಲ್ಲ ಆದರೆ ಕೆಲ ಪದಾಧಿಕಾರಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಬದಲಾವಣೆಯ ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಸ್ಪಷ್ಟಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ನಾಯಕರು ನನ್ನ ಬಳಿ ಯಾವುದೇ ಚರ್ಚೆ ಮಾಡಿಲ್ಲ. ಯಾವುದೇ ಬದಲಾವಣೆಯೂ ಆಗುವುದಿಲ್ಲ ಕೆಪಿಸಿಸಿ ಪದಾಧಿಕಾರಿಗಳ ಪೈಕಿ ಕೆಲವರನ್ನು ಬದಲಾಯಿಸುವುದು ಹಾಗೂ ಜಿಲ್ಲಾ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚಿಸಿದ್ದಾರೆ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ವಿಷಯಗಳ ಬಗ್ಗೆಯೂ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು. 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಶಾಸಕರ ಪತ್ರದ ಬಗ್ಗೆ ಮಾತನಾಡಿ, ನಾನು ಯಾವ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂದು ಒತ್ತಡ ಹೇರಿಲ್ಲ ಎಂದು ಹೇಳಿದರು.

 

Related Articles

error: Content is protected !!