84
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೆ ತಂದಿರುವ 5 ಗ್ಯಾರಂಟಿ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಡವರಿಗಾಗಿ ನಾವು ಗೃಹಲಕ್ಷ್ಮಿ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಬಡವರಿಗಾಗಿ ಜಮೀನು, ನಿವೇಶನ, ಪಿಂಚಣಿ, ಬಿಸಿಯೂಟ ಸೇರಿ ಅನೇಕ ಕಾರ್ಯಕ್ರಮ ಕೊಟ್ಟಿ ದೆ. ಅದೇ ರೀತಿ ಗ್ಯಾರಂಟಿ ನೀಡಿದ್ದೇವೆ. ಆದರೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಸೇರಿ ಬಿಜೆಪಿಯ ಎಲ್ಲ ನಾಯಕರು ಟೀಕೆ ಮಾಡಿದ್ದರು ಎಂದರು.
ಕರ್ನಾ ಟಕದಲ್ಲಿ ಜಾರಿ ನಂತರ ಬಿಜೆಪಿಯವರೇ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರ್ಯಾಣಗಳಲ್ಲಿ ಘೋಷಿಸಿದ್ದರು. ಈಗ ಬಿಹಾರದಲ್ಲಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಸದಾ ದೇಶಕ್ಕೆ ಮಾದರಿ ಎಂದರು.

