ಹಾಸನ : ಸನ್ ಡೈವ್ ಪ್ರಕರಣದ ಮೂಲಕ ಪ್ರಧಾನಿ ಮೋದಿ ಹಾಗೂ ಮಾಜಿ ಸಿಎಂ ಎಚ್ .ಡಿ. ಕುಮಾರಸ್ವಾಮಿ ಅವರ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ನನಗೆ ಡಿಸಿಎಂ ಡಿ.ಕೆ. ಶಿವಕುಮಾರ್ ನೂರು ಕೋಟಿ ರೂಪಾಯಿ ಆಫರ್ ನೀಡಿದ್ದರು ಎಂದು ವಕೀಲ ದೇವರಾಜೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ವಕೀಲ ದೇವರಾಜೇಗೌಡ ಅವರ ಪೊಲೀಸ್ ಕಸ್ಟಡಿ ಅವಧಿ ಶುಕ್ರವಾರ ಅಂತ್ಯಗೊಂಡಿದ್ದರಿಂದ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಮತ್ತೆ ಜಿಲ್ಲಾ ಕಾರಾಗೃಹಕ್ಕೆ ತೆರಳುವ ವೇಳೆ ಜೆಎಂಎಫ್‌ಸಿ ಕೋರ್ಟ್ ಹೊರಗೆ ಪೊಲೀಸ್ ವ್ಯಾನ್‌ನಲ್ಲಿ ಈ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಡಿಕೆಶಿಯೇ ಸೂತ್ರಧಾರಿ :
ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದ್ದಾರೆ. ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಬಳಿ ಪೆನ್ ಡೈವ್ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ ಎಂದು ದೇವರಾಜೇಗೌಡ ಗಂಭೀರ ಆರೋಪ ಮಾಡಿದರು. ಪೆನ್ ಡ್ರೈವ್ ವಿಚಾರವಾಗಿ ಡಿ.ಕೆ. ಶಿವಕುಮಾರ್ ಅವರ ಆಫರ್‌ಗೆ ನಾನು ಒಪ್ಪದಿದ್ದಾಗ ನನ್ನ ಮೇಲೆ ಅಟ್ರಾಸಿಟಿ ಕೇಸ್ ದಾಖಲು ಮಾಡಿಸಿದ್ದಾರೆ. ರೇಪ್ ಕೇಸ್ ನಲ್ಲಿಯೂ ಯಾವುದೇ ದಾಖಲಾತಿ ಸಿಕ್ಕಿಲ್ಲ ನಾಲ್ಕು ದಿನಗಳ ಕಾಲ ನನ್ನನ್ನು ಇಂಟರಾಗೇಟ್ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ದ ವಕೀಲ ದೇವರಾಜೇಗೌಡ ಆರೋಪ ಮಾಡಿದರು.