Home » ಸೇಡಿನ ರಾಜಕಾರಣ ಇಲ್ಲ : ಸಿ ಎಂ,ಡಿಸಿಎಂ
 

ಸೇಡಿನ ರಾಜಕಾರಣ ಇಲ್ಲ : ಸಿ ಎಂ,ಡಿಸಿಎಂ

by Kundapur Xpress
Spread the love

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿಗರ ಆರೋಪವನ್ನು ಕಾಂಗ್ರೆಸ್ ತಳ್ಳಿಹಾಕಿದೆ. ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿಲ್ಲ. ಪ್ರಕರಣದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಯಡಿಯೂರಪ್ಪ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ತೀವ್ರ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನು ಮತ್ತೆ ಮತ್ತೆ ಸ್ಪಷ್ಟಪಡಿಸುತ್ತೇನೆ. ಕಾಂಗ್ರೆಸ್ ಯಾವತ್ತೂ ಯಾವುದೇ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು

   

Related Articles

error: Content is protected !!