ಬೆಂಗಳೂರು : ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಉನ್ನತ ಹುದ್ದೆಯಲ್ಲಿರುವವರು ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ವಸೂಲಿ ಮಾಡಿದೆ ಎಂಬ ಪ್ರಧಾನಮಂತ್ರಿ ಆರೋಪದ ಬಗ್ಗೆ ಮಾಧ್ಯಮಗಳ ಪ್ರಶ್ನಗೆ ಅವರು ಉತ್ತರಿಸಿದರು. ಪ್ರಧಾನಮಂತ್ರಿಗಳು ರಾಜಕೀಯ ಆರೋಪ ಮಾಡುತ್ತಿದ್ದಾರೆ ಅವರು ಈ ಆರೋಪಗಳನ್ನು ಸಾಬೀತುಪಡಿಸಲಿ ನಾವು ಯಾವುದೇ ಶಿಕ್ಷೆಗೆ ಬೇಕಾದರೂ ಗುರಿಯಾಗುತ್ತೇವೆ ಎಂದರು.
ಕೇಂದ್ರ ಸಚಿವರು ಯಾವ ಯಾವ ಚುನಾವಣೆಗೆ ಎಷ್ಟೆಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಉನ್ನತ ಹುದ್ದೆಯಲ್ಲಿರುವವರು ಆಧಾರವಿಲ್ಲದೆ ಆರೋಪ ಮಾಡಬಾರದು. ಮಹಾರಾಷ್ಟ್ರ ಕಾಂಗ್ರೆಸ್ ನವರು ಈ ಬಗ್ಗೆ ನಮ್ಮ ಜತೆ ಚರ್ಚೆಯನ್ನೇ ಮಾಡಿಲ್ಲಎಂದರು