Categories
ರಾಜ್ಯ ಸುದ್ದಿ

ರೂಪಾಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ

 ಬೆಂಗಳೂರು : ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಿ.ರೂಪಾ ಅವರಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ (ಎಡಿಜಿಪಿ)ಯಾಗಿ ಮುಂಬಡ್ತಿ ನೀಡಿದೆ. ಮುಂದಿನ ಆದೇಶದವರೆಗೆ ಸದ್ಯ ಕಾರ್ಯನಿರ್ವ ಹಿಸುತ್ತಿರುವ ಹುದ್ದೆಯಲ್ಲಿ ಮುಂದುವರೆಯುವಂತೆ ಸೂಚಿಸಿದೆ. ರೂಪಾ ಅವರಿಗೆ ಮುಂಬಡ್ತಿ ನೀಡುವಂತೆ ಹೈಕೋರ್ಟ್‌ ಆದೇಶಿಸಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರ ಮುಂಬಡ್ತಿ ನೀಡಿದೆ.