ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ರು ಚಾಜ್೯ಶೀಟ್ ಸಲ್ಲಿಸುತ್ತಿದ್ದಂತೆ ಕೊಲೆ ಆರೋಪಿ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಅವರು ನಗರದ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.ಆರೋಪಿಗಳ ಸಂಬಂಧಿಕರು ನಿಯಮಗಳ ಪ್ರಕಾರ ಅರ್ಧ ಗಂಟೆ ಚರ್ಚಿಸಲು ಅವಕಾಶವಿದೆ ಸಂಜೆ 4.30ರಿಂದ 5.30ರ ವರೆಗೆ ಸಮಯಾವಕಾಶ ಇರಲಿದೆ.ಈ ವೇಳೆ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಅವರನ್ನು ಭೇಟಿ ಮಾಡಿ ಜಾಮೀನು ಪ್ರಕ್ರಿಯೆ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ನ್ಯಾಯವಾದಿಗಳು ಆಗಮಿಸಿದ್ದರು ಎಂದು ತಿಳಿದು ಬಂದಿದೆ.ಇಷ್ಟು ದಿನ ಕಾರಾಗೃಹದಲ್ಲಿ ಆರೋಪಿ ದರ್ಶನ್ ಹೇಗೋ ಕಾಲ ಕಳೆದಿದ್ದರು.ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್ರು 3 ಸಾವಿರಕ್ಕೂ ಹೆಚ್ಚು ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದು, ಆರೋಪಿ ದರ್ಶನ್ ಅವರಿಗೆ ಢವ ಢವ ಶುರುವಾಗಿದೆ.