Home » ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್
 

ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್

by Kundapur Xpress
Spread the love

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ.

ಮಾಧ್ಯಮದವರಿಗೆ ಶುಕ್ರವಾರ ಈ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿ ಮಹಿಳೆಯರಿಂದಲೇ ದಸರಾ ಉದ್ಘಾಟನೆ ನೆರವೇರಿಸಬೇಕು ಎನ್ನುವ ಮನವಿಗಳು ಬಂದಿದ್ದವು. ಅದರಂತೆ ಸರ್ಕಾರವೂ ಮಹಿಳೆಯರಿಗೆ ಈ ಬಾರಿ ಅವಕಾಶ ನೀಡಲು ತೀರ್ಮಾನಿಸಿತ್ತು. ಹಾಗಾಗಿ ಬಾನು ಮುಸ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು. ಮೈಸೂರು ಜಿಲ್ಲಾಡಳಿತದ ವತಿಯಿಂದ ಬಾನು ಮುಸ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

 

Related Articles

error: Content is protected !!