Home » ಇಂದು ಡಿಸಿಎಂ, ನಾಳೆ ಸಿಎಂ ದೆಹಲಿಗೆ
 

ಇಂದು ಡಿಸಿಎಂ, ನಾಳೆ ಸಿಎಂ ದೆಹಲಿಗೆ

by Kundapur Xpress
Spread the love

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಭೇಟಿಗಾಗಿ ಮಂಗಳವಾರ ದೆಹಲಿಗೆ ತೆರಳಲಿದ್ದು, ಬೆನ್ನಲ್ಲೇ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭೇಟಿಗಾಗಿ ರಾಷ್ಟ್ರರಾಜಧಾನಿಗೆ ಪ್ರಯಾಣ ಬೆಳೆಸಲಿದ್ದಾರೆ. 

ಇಂದು ಬೆಳಗ್ಗೆ 8.00 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿರುವ ಡಿ.ಕೆ. ಎ.ಕೆ.ಶಿವಕುಮಾರ್ ಅವರು, ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿ ತುಮಕೂರು ಹಾಗೂ ಹಾಸನ ಭಾಗದಲ್ಲಿ ಅರಣ್ಯ ಭೂಮಿಗೆ ಸಂಬಂಧಿಸಿ ಅನುಮತಿ ಬಗ್ಗೆ ಚರ್ಚಿಸಲು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವರನ್ನು ಭೇಟಿ ಮಾಡಲಿದ್ದಾರೆ. ಇದೇ ವೇಳೆ ಕೇಂದ್ರ ಜಲಶಕ್ತಿ ಸಚಿವರನ್ನೂ ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚಿಸುವ ಸಲುವಾಗಿ ರಕ್ಷಣಾ ಸಚಿವ ರಾಜನಾಥಸಿಂಗ್ ರನ್ನು ಭೇಟಿಯಾಗಲಿದ್ದಾರೆ. ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿಯವರು ಸಂಜೆ ರಾಜನಾಥಸಿಂಗ್ ರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ

 

Related Articles

error: Content is protected !!