Home » ಕರ್ನಾಟಕದಲ್ಲಿ 3 ದಿನ ಶೋಕಾಚರಣೆ
 

ಕರ್ನಾಟಕದಲ್ಲಿ 3 ದಿನ ಶೋಕಾಚರಣೆ

ಎಸ್​ಎಂ ಕೃಷ್ಣ ನಿಧನ

by Kundapur Xpress
Spread the love

ಬೆಂಗಳೂರು : ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ  ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಇಂದು ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. 

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

ಎಸ್​ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. 

 

Related Articles

error: Content is protected !!