ಮಂಗಳೂರು: ಹಿರಿಯ ಸಾಹಿತಿ ನಾ. ಡಿಸೋಜ (ನಾರ್ಬರ್ಟ್ ಡಿಸೋಜ) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 87ವರ್ಷ ವಯಸ್ಸಾಗಿತ್ತು.
ಮೂಲತ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂ.6ರಂದು ಜನಿಸಿದ ನಾ.ಡಿಸೋಜಾ ಅವರು ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರಲ್ಲೊಬ್ಬರಾಗಿದ್ದರು. ಇಂದು ಸೋಮವಾರ ಸಾಗರದ ಗಾಂಧಿ ಮೈದಾನದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾ. ಡಿಸೋಜ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.