ಬೆಂಗಳೂರು : 270ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಸರಿಗಮ ವಿಜಿ ಎಂದೇ ಖ್ಯಾತರಾಗಿದ್ದ ಹಿರಿಯ ನಟ ಆರ್.ವಿಜಯ್ ಕುಮಾರ್ (76) ಬಹು ಅಂಗಾಗ ವೈಫಲ್ಯದಿಂದ ವಿಧಿವಶರಾಗಿದ್ದಾರೆ. ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಶ್ವಾಸಕೋಶ ಸೋಂಕಿನಿಂದ ಕಳೆದ ವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅಸುನೀಗಿ ದ್ದಾರೆ. ಹಿರಿಯ ಕಲಾವಿದನ ನಿಧನಕ್ಕೆ ರಾಜಕೀಯ, ಸಿನಿಮಾ ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಗುರುವಾರ ಬೆಳಗ್ಗೆ ಬೆಂಗಳೊರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸರಿಗಮ ವಿಜಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಮಧ್ಯಾಹ್ನದ ಬಳಿಕ ಚಾಮರಾಜ ಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ