164
ಬೆಂಗಳೂರು : ವಿಶ್ವದ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಉನ್ನತ ಸ್ಥಾನಕ್ಕೇರಲು ಸೇವೆ ಸಲ್ಲಿಸಿದ್ದ ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಶುಕ್ರವಾರ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು
2 ವರ್ಷಗಳ ಹಿಂದೆ ಹೃದಯಾಘಾತಕ್ಕೊಳಗಾಗಿ ಚೇತರಿಸಿಕೊಂಡಿದ್ದರು. ಅದಾದ ನಂತರ ಅನಾರೋಗ್ಯಕ್ಕೊಳಗಾಗಿದ್ದ ಅವರು, ಶುಕ್ರವಾರ ಕೊಡಿಗೇಹಳ್ಳಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಸ್ತೂರಿ ರಂಗನ್ ಅವರು ಇಬ್ಬರು ಪುತ್ರರನ್ನು ಹೊಂದಿದ್ದು, ಅವರು ಸದ್ಯ ವಿದೇಶದಲ್ಲಿದ್ದಾರೆ. ಅವರು ಭಾರತಕ್ಕೆ ಆಗಮಿಸಬೇಕಿರುವ ಕಾರಣ ಏ.27ರಂದು ಭಾನುವಾರ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಏ.27ರಂದು ಬೆಳಗ್ಗೆ 10ರಿಂದ 12ರವರೆಗೆ ಸದಾಶಿವನಗರದಲ್ಲಿನ ರಾಮನ್ ಸಂಶೋಧನಾ ಸಂಸ್ಥೆ (ಆರ್ ಆರ್‌ಐ)ನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಇಸ್ರೋ ಸಂಸ್ಥೆ ತಿಳಿಸಿದೆ.

