ರಾಮನಗರ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿದ್ಈದು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ
ಮೃತಪಟ್ಟವರು ಬೆಂಗಳೂರಿನ ಬನಶಂಕರಿಯ ನಿವಾಸಿ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಎಂದು ತಿಳಿದುಬಂದಿದ್ದು ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ
ಗೌರಮ್ಮ ಅವರ ಮೃತದೇಹವನ್ನು ಚೆನ್ನಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ. ಹಾಗೇ ನಿಖಿಲ್ ಕುಮಾರಸ್ವಾಮಿ ಕೂಡಾ ಅಂತಿಮ ದರ್ಶನ ಪಡೆದಿದ್ದಾರೆ.