ಬೆಂಗಳೂರು : ಮಾಜಿ ಸಿಎಂ ಬಿಎಸ್ವೈ ಮತ್ತು ಕೇಂದ್ರ ಸಚಿವ ಹೆಚ್ಡಿಕೆ ಮೇಲೆ ಡಿನೋಟಿಫಿಕೇಷನ್ ಹಗರಣ ಆರೋಪವನ್ನು ಕಾಂಗ್ರೆಸ್ ಮಾಡಿದೆ. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದ ಕೃಷ್ಣ ಬೈರೆಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಜಂಟಿ ಸುದ್ದಿಗೋಷ್ಠಿ ನಡೆಸಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಡಿನೋಟಿಫಿಕೇಷನ್ ಹಗರಣದ ಬಗ್ಗೆ ದಾಖಲೆ ಸಮೇತ ಬಹಿರಂಗ ಮಾಡಿದರು.
ಬೆಂಗಳೂರಿನ ಗಂಗೇನಹಳ್ಳಿಯ ಬಿಡಿಎ ಸೈಟ್ 1 ಎಕರೆ 11 ಗುಂಟೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ.ಸತ್ತವರ ಹೆಸರಿನಲ್ಲಿ ನೂರಾರು ಕೋಟಿಗೂ ಹೆಚ್ಚು ಬೆಲೆಬಾಳುವ ಆಸ್ತಿಯನ್ನ ಯಡಿಯೂರಪ್ಪನವರ ಕೈಯಲ್ಲಿ ಡಿನೋಟಿಫಿಕೇಷನ್ ಕುಮಾರಸ್ವಾಮಿ ಮಾಡಿಸಿದ್ದಾರೆ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪಾತ್ರ ಏನು ಇಲ್ಲದಿದ್ದರು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುವ ಇವರು ಇವರೇನು ಮಾಡಿದ್ದಾರೆ ನೋಡಿ ಎಂದ ಅವರು ಕೂಡಲೇ ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ